﻿ಕೀರ್ತನೆ.
47.
ರಚನೆಗಾರರು: ಕೋರಹೀಯರು. ಸರ್ವಜನಾಂಗಗಳೇ, ಚಪ್ಪಾಳೆ ತಟ್ಟಿರಿ; ದೇವರಿಗೆ ಆನಂದಘೋಷ ಮಾಡಿರಿ! 
ಮಹೋನ್ನತನಾದ ಯೆಹೋವನು ಭಯಂಕರನಾಗಿದ್ದಾನೆ. ಆತನು ಭೂಲೋಕಕ್ಕೆಲ್ಲಾ ಮಹಾರಾಜನಾಗಿದ್ದಾನೆ. 
ಆತನು ಜನಾಂಗಗಳನ್ನು ಸೋಲಿಸಲು ನಮಗೆ ಸಹಾಯಮಾಡಿ ಅವುಗಳನ್ನು ನಮಗೆ ಅಧೀನಪಡಿಸಿದ್ದಾನೆ. 
ದೇವರು ಈ ದೇಶವನ್ನು ನಮಗೋಸ್ಕರವಾಗಿ ಆರಿಸಿಕೊಂಡನು; ತನಗೆ ಪ್ರಿಯರಾದ ಯಾಕೋಬನ ವಂಶಸ್ಥರಿಗಾಗಿ ಆತನು ಮನೋಹರವಾದ ಈ ದೇಶವನ್ನು ಆರಿಸಿಕೊಂಡನು. 
ಯೆಹೋವನು ಆನಂದಘೋಷದೊಡನೆಯೂ ತುತ್ತೂರಿಗಳ ಧ್ವನಿಯೊಡನೆಯೂ ಸಿಂಹಾಸನಾರೂಢನಾಗುವನು. 
ದೇವರನ್ನು ಸಂಕೀರ್ತಿಸಿರಿ, ಕೀರ್ತಿಸಿರಿ. ನಮ್ಮ ರಾಜನನ್ನು ಸಂಕೀರ್ತಿಸಿರಿ, ಸಂಕೀರ್ತಿಸಿರಿ. 
ದೇವರು ಇಡೀಲೋಕಕ್ಕೆ ರಾಜನಾಗಿದ್ದಾನೆ; ಆತನಿಗೆ ಸ್ತುತಿಗೀತೆಗಳನ್ನು ಹಾಡಿರಿ. 
ದೇವರು ತನ್ನ ಪರಿಶುದ್ಧ ಸಿಂಹಾಸನದ ಮೇಲೆ ಕುಳಿತುಕೊಂಡಿದ್ದಾನೆ; ದೇವರು ಎಲ್ಲಾ ಜನಾಂಗಗಳನ್ನು ಆಳುವನು. 
ಜನಾಂಗಗಳ ನಾಯಕರು ಅಬ್ರಹಾಮನ ದೇವಜನರೊಡನೆ ಕೂಡಿಬರುವರು. ಎಲ್ಲಾ ಜನಾಂಗಗಳ ಎಲ್ಲಾ ನಾಯಕರುಗಳು ದೇವರಿಗೆ ಅಧೀನರಾಗಿದ್ದಾರೆ. ದೇವರು ಅವರಿಗೆ ಸರ್ವಾಧಿಕಾರಿ! 
