﻿ಕೀರ್ತನೆ.
117.
ಸರ್ವಜನಾಂಗಗಳೇ, ಯೆಹೋವನನ್ನು ಕೊಂಡಾಡಿರಿ. ಸರ್ವಜನರೇ, ಆತನನ್ನು ಸ್ತುತಿಸಿರಿ. 
ಆತನ ಪ್ರೀತಿಯು ನಮ್ಮ ಮೇಲೆ ಅಪಾರವಾಗಿದೆ. ಆತನ ನಂಬಿಗಸ್ತಿಕೆಯು ಶಾಶ್ವತವಾದದ್ದು. ಯೆಹೋವನಿಗೆ ಸ್ತೋತ್ರವಾಗಲಿ. 
