﻿ಕೀರ್ತನೆ.
121.
ದೇವಾಲಯಕ್ಕೆ ಹೋಗುವಾಗ ಹಾಡುವ ಗೀತೆ. ನಾನು ಕಣ್ಣೆತ್ತಿ ಪರ್ವತಗಳ ಕಡೆಗೆ ನೋಡುತ್ತೇನೆ. ನನಗೆ ಸಹಾಯವು ಎಲ್ಲಿಂದ ಬರುವುದು? 
ಭೂಮ್ಯಾಕಾಶಗಳ ಸೃಷ್ಟಿಕರ್ತನಾದ ಯೆಹೋವನಿಂದಲೇ ನನಗೆ ಸಹಾಯವು ಬರುವುದು. 
ಆತನು ನಿನ್ನನ್ನು ಬೀಳಗೊಡಿಸುವುದಿಲ್ಲ; ನಿನ್ನ ಸಂರಕ್ಷಕನು ನಿದ್ರೆಹೋಗುವುದಿಲ್ಲ. 
ಇಸ್ರೇಲಿನ ಸಂರಕ್ಷಕನು ತೂಕಡಿಸುವುದಿಲ್ಲ, ನಿದ್ರಿಸುವುದೂ ಇಲ್ಲ! 
ನಿನ್ನನ್ನು ಕಾಯುವವನು ಯೆಹೋವನೇ. ನಿನ್ನನ್ನು ರಕ್ಷಿಸಲು ಆತನು ನಿನ್ನ ಬಲಗಡೆಯಲ್ಲಿ ನಿಂತಿದ್ದಾನೆ. 
ಹಗಲಲ್ಲಿ ಸೂರ್ಯನೂ ರಾತ್ರಿಯಲ್ಲಿ ಚಂದ್ರನೂ ನಿನ್ನನ್ನು ಬಾಧಿಸುವುದಿಲ್ಲ. 
ಯೆಹೋವನು ನಿನ್ನನ್ನು ಎಲ್ಲಾ ಅಪಾಯಗಳಿಂದ ರಕ್ಷಿಸುವನು; ನಿನ್ನ ಪ್ರಾಣವನ್ನು ಕಾಯುವನು. 
ನೀನು ಹೋಗುವಾಗಲೂ ಬರುವಾಗಲೂ ಯೆಹೋವನು ನಿನಗೆ ಸಹಾಯಮಾಡುವನು. ಆತನು ನಿನ್ನನ್ನು ಸದಾಕಾಲ ಕಾಪಾಡುವನು. 
