﻿ಕೀರ್ತನೆ.
133.
ದೇವಾಲಯಕ್ಕೆ ಹೋಗುವಾಗ ಹಾಡುವ ಗೀತೆ. ರಚನೆಗಾರ: ದಾವೀದ. ಆಹಾ, ಸಹೋದರರು ಅನ್ಯೋನ್ಯತೆಯಿಂದಿರುವುದು ಎಷ್ಟೋ ಒಳ್ಳೆಯದು, ಎಷ್ಟೋ ರಮ್ಯವಾದದ್ದು. 
ಅದು ಯಾಜಕನ ತಲೆಯ ಮೇಲೆ ಹಾಕಲ್ಪಟ್ಟು ಆರೋನನ ಗಡ್ಡಕ್ಕೂ ಅಲ್ಲಿಂದ ಅವನ ಉಡುಪುಗಳ ಮೇಲೆಯೂ ಇಳಿದುಬರುವ ಪರಿಮಳ ತೈಲದಂತಿರುವುದು; 
ಅದು ಹೆರ್ಮೋನ್ ಪರ್ವತದಿಂದ ಹುಟ್ಟಿ ಚೀಯೋನ್ ಪರ್ವತದ ಮೇಲೆ ಬೀಳುವ ದಟ್ಟವಾದ ಮಂಜಿನಂತಿರುವುದು. ಯೆಹೋವನು ನಿತ್ಯಜೀವವೆಂಬ ತನ್ನ ಆಶೀರ್ವಾದವನ್ನು ಅನುಗ್ರಹಿಸಿದ್ದು ಚೀಯೋನಿನಲ್ಲಿಯೇ. 
