﻿ಕೀರ್ತ.
134.
ಯಾತ್ರಾಗೀತೆ. ರಾತ್ರಿಯಲ್ಲಿ ಯೆಹೋವನ ಮಂದಿರದಲ್ಲಿರುವ ಆತನ ಸರ್ವಸೇವಕರೇ, ಬನ್ನಿರಿ, ಯೆಹೋವನನ್ನು ಕೊಂಡಾಡಿರಿ. 
ಮಹಾಪರಿಶುದ್ಧ ಸ್ಥಳದ ಕಡೆಗೆ ಕೈಯೆತ್ತಿ, ಯೆಹೋವನನ್ನು ಕೊಂಡಾಡಿರಿ. 
ಭೂಮ್ಯಾಕಾಶಗಳನ್ನು ಉಂಟುಮಾಡಿದ ಯೆಹೋವನು, ಚೀಯೋನಿನೊಳಗಿಂದ ನಿನ್ನನ್ನು ಆಶೀರ್ವದಿಸಲಿ. 
